ಬಾಗಲಕೋಟೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇದೇ ದಿ. 29 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಜಮಖಂಡಿಗೆ ಆಗಮಿಸಲಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರ ಮಾಡಲಿದ್ದಾರೆ.
ಅಂದು ಬೆಳಗ್ಗೆ ದೆಹಲಿಯಿಂದ ವಿಮಾನ ಮೂಲಕ ಬೆಳಗಾವಿಗೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಜಮಖಂಡಿಗೆ ಆಗಮಿಸುವರು.ನಂತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಸಭೆ ಬಳಿಕ ಬೆಳಗಾವಿಗೆ ವಾಪಸ್ಸಾಗಲಿದ್ದಾರೆ. ಅಲ್ಲಿಂದ ಅವರು ಕಲಬುರಗಿಗೆ ತೆರಳಲಿದ್ದಾರೆ.