
ಬಾಗಲಕೋಟೆ ; ಪ್ರಚೋದನಕಾರಿ ಭಾಷಣ ಮಾಡಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲಾಗಿದೆ.
ಗುರುವಾರ ಮುಧೋಳ ಜನತಾ ಪಾರ್ಟನ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ತೆರದ ವಾಹನದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಟಿಪ್ಪು ಸುಲ್ತಾನ ಮತ್ತು ಔರಂಗಜೇಬ್ ಕುರಿತು ಅಸಂವಿಧಾನಿಕ ಪದಗಳನ್ನು ಬಳಿಸಿದ ಹಿನ್ನೆಲೆಯಲ್ಲಿ ಅವರ ಮೇಲೆ ಮುಧೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಮರನಾಥ ರೆಡ್ಡಿ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.