ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊ ಳಿಸಲು ಆಗ್ರಹಿಸಿ ನಡೆಯುತ್ತಿರುವ ಸಂತ್ರಸ್ತರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮೂರನೇ ದಿನ ತೀವ್ರ ಸ್ವರೂಪ ಪಡೆದುಕೊಂಡರುವ ಸಂತ್ರಸ್ತರ ಹೋರಾಟ ಇಂದು ಬೆಳಗ್ಗೆ ಬೀಳಗಿ ಕ್ರಾಸ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು, ಎಸ್ ಎಲ್ ಓ ಕಚೇರಿಗೆ ಮುತ್ತಿಗೆ ಹಾಕಿ ಸಂತ್ರಸ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಸ್ಪಂದಿಸದ ಹಿನ್ನೆಲೆ ರೊಚ್ಚಿಗೆದ್ದ ಮುಳುಗಡೆ ಸಂತ್ರಸ್ತರು ಬೀಳಗಿ ಕ್ರಾಸ್ ಬಳಿ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ಹೊರಹಾಕಿದರು.
ಐದು ರಿಂದ ಆರು ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು ಕಂಡು ಬಂದಿತು.