ಬಾಗಲಕೋಟೆ: ತಾಲೂಕಾ ಗಾಣಿಗ ಸಮಾಜ, ಜ್ಯೋತಿ ಕೋ ಆಪ್ ಕ್ರೆಡಿಟ್ ಸೊಸೈಟಿ ಸಹಯೋಗದಲ್ಲಿ ೨೦೨೪-೨೫ ನೇ ಸಾಲಿನ ಗಾಣಿಗ ಸಮಾಜದ ಎಸ್.ಎಸ್.ಎಲ್‌ಸಿ., ಪಿಯುಸಿ ವಿದ್ಯಾರ್ಥಿ ಗಳಿಗೆ ಹಾಗೂ ನಿವೃತ್ತ ನೌಕರರು, ಸಾಧಕರಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದೇವೆ ಎಂದು ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ಲಾಗಲೋಟಿ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ದಿ.೬ ರಂದು ಬೆಳಿಗ್ಗೆ ೧೦.೩೦ ಕ್ಕೆ ಚರಂತಿಮಠದ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಜರುಗಲಿದ್ದು, ಸಮಾ ರಂಭದ ದಿವ್ಯ ಸಾನ್ನಿಧ್ಯವನ್ನು ಡಾ.ಜಯಬಸವ ಕುಮಾರ ಸ್ವಾಮೀಜಿಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ಲಾಗಲೋಟಿ ವಹಿಸುವರು. ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ, ಸಂಸದ ಪಿ.ಸಿ.ಗದ್ದಿಗೌಡರ ಕಾರ್ಯಕ್ರಮ ಉದ್ಘಾಟಿಸುವರು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಆನಂದ ನ್ಯಾಮಗೌಡ, ಅಖಿಲ ಭಾರತ ಗಾಣಿಗ ಸಂಘದ ರಾಜ್ಯಾಧ್ಯಕ್ಷ ಗುರಣ್ಣ ಗೋಡಿ, ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಗಾಣಿಗ ಸಮಾಜದ ನೌಕರರ ಸಂಘದ ರಾಜ್ಯಾಧ್ಯಕ್ಷ ಆರ್.ಜಿ.ಪಾಟೀಲ, ಕಾಂಗ್ರೆಸ್ ಮುಖಂಡ ಬಸವಪ್ರಭು ಸರನಾಡಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕುಮಾರ ಯಳ್ಳಿಗುತ್ತಿ, ಜ್ಯೋತಿ ಕೋ ಆಪ್ ಕ್ರೀಡಿಟ್ ಸೋಸೈಟಿ ಅಧ್ಯಕ್ಷ ಸಿದ್ದಣ್ಣ ಕಾಖಂಡಕಿ, ಯುವ ಮುಖಂಡ ಸಂತೋಷ ಹೊಕ್ರಾಣಿ, ಗಾಣಿಗ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ನಿಂಗಣ್ಣ ಗೋಡಿ, ಅಖಿಲ ಭಾರತ ಗಾಣಿಗ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷ ದುಂಡಪ್ಪ ಏಳಮ್ಮಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕವಿತಾ ಏಳಮ್ಮಿ, ಯುವ ಘಟಕದ ತಾಲೂಕಾ ಅಧ್ಯಕ್ಷ ವಿರೇಶ ಹೆರಕಣ್ಣವರ್ ಆಗಮಿಸಲಿದ್ದಾರೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದುಂಡಪ್ಪ ಏಳಮ್ಮಿ, ಸಿದ್ದಣ್ಣ ಕಾಖಂಡಕಿ, ನಿಂಗಣ್ಣ ಗೋಡಿ, ಪರಶುರಾಮ ಛಬ್ಬಿ ಉಪಸ್ಥಿತರಿದ್ದರು.