ಬಾಗಲಕೋಟೆ ; ಕಬ್ಬು ಕಡಿಯಲು ಬಂದ ಗ್ಯಾಂಗ್ ಜೊತೆ ಮಹಾರಾಷ್ಟ್ರಕ್ಕೆ ಹೋಗಿ ನಾಪತ್ತೆಯಾದ ಮಹಿಳೆ ಮಧ್ಯಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ಸಖಿ ಒನ್ ಸ್ಟಾಪ್ ಕೇಂದ್ರದ ಸಿಬ್ಬಂದಿಗಳ ಕಾರ್ಯದಿಂದ ಮಹಿಳೆ ಮರಳಿ ಗೂಡಿಗೆ ಸೇರುವಂತಾಗಿದೆ. ಜಿಲ್ಲೆಯ ಮುಧೋಳ ತಾಲೂಕಿನ ಚಿತ್ರಬಾನಕೋಟೆ ಗ್ರಾಮದ ತಾಯವ್ವ ಗಂಡ ಸುರೇಶ್ ಅರಬೆಂಚಿ ವಯಸ್ಸು ಅಂದಾಜು 50 ಸಂತ್ರಸ್ತೆ ಮಹಿಳೆ ಮಧ್ಯಪ್ರದೇಶದ ರಿವಾ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿ ರಕ್ಷಣೆ ಮಾಡಿ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಿದ್ದರು. ತಾಯವ್ವ ಅರಬೆಂಚಿ ಎನ್ನುವ ಸಂತ್ರಸ್ತೆ ಮೂಲತಃ ಬಾಗಲಕೋಟೆ ಜಿಲ್ಲೆಯವರು ಎಂದು ಪತ್ತೆ ಹಚ್ಚಿದ ಅಲ್ಲಿನ ಸಖಿ ಕೇಂದ್ರದ ಸಿಬ್ಬಂದಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಖಿ ಕೇಂದ್ರದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯನ್ನು ರಕ್ಷಣೆ ಮಾಡಿ ಬಾಗಲಕೋಟೆ ಜಿಲ್ಲೆಗೆ ಪೊಲೀಸರು ಹಾಗೂ ಸಖಿ ಕೇಂದ್ರದ ಸಿಬ್ಬಂದಿ ಕರೆದುಕೊಂಡು ಬಂದಿದ್ದು. ಸಂತ್ರಸ್ತೆ ಮಹಿಳೆಯನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತೆ ತಾಯವ್ವ ಅರಬೆಂಚಿ ಹೇಗೆ…
Author: Sanje
ಬಾಗಲಕೋಟೆ ; ಯಾಂತ್ರಿಕ ಬದುಕಿನ ಜೀವನದ ಕಾರ್ಯ ಶೈಲಿಗೆ ಹೊಂದುವಂತೆ ಇಂದು ನಾವೆಲ್ಲರೂ ಹೊರಗಿನ ಪದಾರ್ಥಗಳ ಬಣ್ಣ, ರುಚಿ, ವಾಸನೆಗೆ ಮರುಳಾಗಿ ಅರೆ ಆಯುಷ್ಯ ಹೊಂದುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್,ಬಿ.ತಿಮ್ಮಾಪೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು, ಜಿಲ್ಲಾ ಕೃಷಿಕ ಸಮಾಜ, ಕೃಷಿ ವಿಶ್ವವಿದ್ಯಾಲಯ ಧಾರವಾಡ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಸಾವಯವ ಮೇಳ ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಜೋಳ, ಸಜ್ಜಿ, ನವಣಿ, ಗೂರಲು, ಅಗಸಿ ಮಡಿಕೆ ಮುಂತಾದ ಸಿರಿಧಾನ್ಯಗಳನ್ನು ಬಳಸಿಕೊಂಡು ಸದೃಡ ಕಾಯದೊಂದಿಗೆ ನೂರಾರು ವರ್ಷ ಬಾಳುತ್ತಿದ್ದರು. ಆದರೆ ಇಂದು ಸ್ವಲ್ಪ ಸಮಯದಲ್ಲಿ ರಾಸಾಯನಿಕ ಗೊಬ್ಬರಕ್ಕೆ ಮೊರೆ ಹೋಗಿ ಅಧಿಕ ಇಳುವರಿ ಬೆಳೆದು ಹಣ ಮಾಡಬೇಕೆಂಬ ದುರಾಸೆಯಿಂದ ವಿಷ ಆಹಾರ ತಿನ್ನು ಪರಿಸ್ಥಿತಿ ಬಂದಿದೆ.…
ಬಾಗಲಕೋಟೆ ; ಉತ್ಸಾಹ ಜೀವನಕ್ಕೆ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯದಿಂದಿಲು ಕ್ರೀಡೆಗಳು ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೇರಳೆ ಹೇಳಿದರು. ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ ಎಲ್ಲ ವೃಂದದ ಸಂಘಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿದಿನ ಒಂದು ಗಂಟೆಯಾದರೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಮಾತ್ರ ಉತ್ಸಾಹದಿಂದಿರಲು ಸಾಧ್ಯ. ಇಂದು ಕ್ರೀಡಾಕೂಟಗಳಲ್ಲಿ ಮಕ್ಕಳು ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಹಿಂದೆ ಆಟವಾಡಲು ಹೋದರೆ ಸಂಜೆಯವರೆಗೆ ಮನೆಗೆ ಬರುತ್ತಿರಲಿಲ್ಲ. ಆದರೆ ಇಂದು ಮೊಬೈಲ್ ಪ್ರಭಾವಕ್ಕೆ ಒಳಗಾಗಿ ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಅವರನ್ನು ನಾವೆ ಆಟವಾಡಲು ಕಳುಹಿಸುವ ಪ್ರಸಂಗ ಒದಗಿ ಬಂದಿದೆ ಎಂದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ್ ಮಾತನಾಡಿ ಕ್ರೀಡೆಗಳು…
ಬಾಗಲಕೋಟೆ: ತಾಲ್ಲೂಕಿನ ಸುಕ್ಷೇತ್ರ ಮುಚಖಂಡಿ ಗ್ರಾಮದ ಆರಾಧ್ಯ ದೈವ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.೨೬ರಂದು ಮಹಾರಥೋತ್ಸವ ನಡೆಯಲಿದ್ದು ಜಾತ್ರೆಗಾಗಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವೀರಭದ್ರೇಶ್ವರ ಜೀರ್ಣೋದ್ಧಾರ ಕಮಿಟಿಯ ಅಧ್ಯಕ್ಷ ಗುರುಬಸವ ಸೂಳಿಭಾವಿ ತಿಳಿಸಿದರು. ಗುರುವಾರ ಜಾತ್ರೆಯ ನಿಮಿತ್ತ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಪ್ರತಿವರ್ಷ ಕಾರ್ತಿಕೋತ್ಸವ ಅಂಗವಾಗಿ ಜಾತ್ರಾ ಮಹೋತ್ಸವ ನಡೆಯಲಿದ್ದು ಜಾತ್ರೆಗೆ ಬರುವ ಭಕ್ತರಿಗೆ ಅನುಕೂಲಕರ ವಾತಾವರಣ ಕಲ್ಪಿಸಲು ಎಲ್ಲ ಸಿದ್ಧತೆಯನ್ನು ಮುಚಖಂಡಿ ಗ್ರಾಮದ ಗುರುಹಿರಿಯರು, ಯುವಕರು ಹಾಗೂ ವೀರಭದ್ರೇಶ್ವರ ಜೀರ್ಣೋದ್ಧಾರ ಕಮಿಟಿಯ ಎಲ್ಲ ಸದಸ್ಯರ ಸಹಕಾರದಿಂದೊಂದಿಗೆ ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಕೂಡ ಮಾಡಲಾಗಿದೆ ಎಂದರು. ಪ್ರತಿವರ್ಷ ಹೊಸ್ತಿಲ ಹುಣ್ಣಿಮೆಯಲ್ಲಿ ಬರುವ ಜಾತ್ರೆಯು ೧೯೭೨ ರಿಂದ ಆರಂಭಗೊಂಡಿದ್ದು ಈ ವರ್ಷ ೫೧ನೇ ವರ್ಷದ ಜಾತ್ರೆಯನ್ನು ಆಚರಿಸಲಾಗುತ್ತಿದೆ. ಜಾತ್ರೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ ಎಂದು ಹೇಳಿದರು. ಡಿ.೨೨ರಂದು ಮುಚಖಂಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಿಂದ ಗ್ರಾಮದ ಅಗಸಿ ಬಾಗಿಲವರೆಗೆ ಚಿಕ್ಕ ರಥೋತ್ಸವ ಸಂಜೆ ೭…
ಬಾಗಲಕೋಟೆ: ಜಿಲ್ಲೆಯ ಎಲ್ಲ 9 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಕರ್ನಾಟಕ ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಪುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ಬೆಳೆ ನಷ್ಟ ಪರಿಹಾರವನ್ನು ವಿತರಿಸಲಾಗುವ ಪ್ರಯುಕ್ತ ರೈತರು ತಾವು ಹೊಂದಿರುವ ಎಲ್ಲಾ ಸರ್ವೇ ನಂಬರಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ. ಬೆಳೆ ನಷ್ಟ ಪರಿಹಾರವನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ.) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ರೈತರು ತಮ್ಮ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗಳಿಗೆ ಬ್ಯಾಂಕ್‍ಗಳಲ್ಲಿ ಆಧಾರ್ ಜೋಡಣೆಯೊಂದಿಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕೂಡಾ ಅತ್ಯವಶ್ಯವಾಗಿದೆ. ಪ್ರಸ್ತುತ ಜಿಲ್ಲೆಯ ಒಟ್ಟು 5,39,621 ರೈತರ ತಾಕುಗಳ ಪೈಕಿ 4,33,851 ರೈತರ ತಾಕುಗಳ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ 1,05,770 ಭೂ-ಹಿಡುವಳಿಗಳ ನೋಂದಣಿ ಕಾರ್ಯ ಫ್ರೂಟ್ಸ್ ತಂತ್ರಾಂಶದಲ್ಲಿ ಬಾಕಿ ಇರುತ್ತದೆ. ಬಾಗಲಕೋಟೆ ಜಿಲ್ಲೆಯು ಫ್ರೂಟ್ಸ್…
ಬಾಗಲಕೋಟೆ ; ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಸಾಯವಯ ಮೇಳದ ಅಂಗವಾಗಿ ಹಮ್ಮಿಕೊಂಡ ಸಿರಿಧಾನ್ಯ ನಡಿಗೆಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ಜಿ.ಪಂ ಸಿಇಓ ಶಶೀಧರ ಕುರೇರ ಜಂಟಿಯಾಗಿ ಗುರುವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅವರು ಎಲ್ಲ ವಯಸ್ಸಿನವರು ಸಿರಿಧಾನ್ಯಗಳನ್ನು ಬಳಕೆ ಮಾಡುವದರಿಂದ ಹಲವಾರು ರೋಗಗಳಿಂದ ದೂರವಿರಲು ಸಾಧ್ಯವಿದೆ. ಉತ್ತಮ ಸಮಾಜಕ್ಕಾಗಿ ಸಿರಿಧಾನ್ಯ ಆಹಾರ ಬಳಕೆ ಅವಶ್ಯವಾಗಿದೆ. ಸಿರಿಧಾನ್ಯಗಳನ್ನು ಬಳಕೆ ಮಾಡುವದರಿಂದ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತಿದೆ. ಸಾವಯುವ ಪದ್ದತಿಯಲ್ಲಿ ಸಿರಿಧಾನ್ಯ ಬೆಳೆಯುವದರಿಂದ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಸಿರಿಧಾನ್ಯಗಳ ಹೆಚ್ಚೆಚ್ಚು ಬಳಕೆ ಮಾಡುವದರಿಂದ ರೈತರಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ ಮಾತನಾಡಿ ವಿಶ್ವ ಸಂಸ್ಥೆಯು 2023ನ್ನು ವಿಶ್ವ ಸಿರಿಧಾನ್ಯ ದಿನವನ್ನಾಗಿ ಆಚರಿಸುತ್ತಿದ್ದು, ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಇವುಗಳ ಬಳಕೆಯಿಂದ ಹಲವು ರೋಗಳಿಂದ ಮುಕ್ತರಾಗಬಹುದು ಎಂದು ತಿಳಿಸಿದರು.…
ಬಾಗಲಕೋಟೆ : ರಾಜ್ಯಾದ್ಯಂತ ಸೇವೆ ಸಲ್ಲಿಸುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕೂಡಲೇ ಕಾಯಂಗೊಳಿಸುವ ಮೂಲಕ ಅವರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಚರಂತಿಮಠ ಮತ್ತು ವಸ್ರ್ತದ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ಚರಂತಿಮಠ ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 27 ದಿನಗಳಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು. ಅತಿಥಿ ಉಪನ್ಯಾಸಕರು ಅತ್ಯಂತ ಕಡಿಮೆ ವೇತನದಲ್ಲಿ ಕೆಲಸ ಮಾಡುತ್ತಿದ್ದಾರೆ. ದೇಶದ ಯುವ ಸಮುದಾಯವನ್ನು ವಿದ್ಯಾವಂತರನ್ನಾಗಿ ಮಾಡುವ ಜತೆಗೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಉಪನ್ಯಾಸಕರು ನಿಭಾಯಿಸುತ್ತಿದ್ದಾರೆ. ಕಳೆದ 27 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸಚಿವರು, ಸಂಬಂದಿಸಿದ ಅಧಿಕಾರಿಗಳು ಅವರ ಬೇಡಿಕೆಗೆ ಸ್ಪಂದಿಸದೇ ಇರುವುದು ಸರ್ಕಾರದ ನಿರ್ಲಕ್ಷ್ಯ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು. ಉಪನ್ಯಾಸಕರು, ತರಗತಿ ಬಹಿಷ್ಕರಿಸಿ ಹೋರಾಟ ನಡೆ ಸುತ್ತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೂ ಸಮಸ್ಯೆ ಯಾಗಿದೆ. ಈ ಕೂಡಲೇ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಹಾಗೂ ಉಪನ್ಯಾಸಕರ ಬದುಕಿಗೆ ಭದ್ರತೆಗಾಗಿ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು.…
ಬಾಗಲಕೋಟೆ: ದೇಶದ ಭವಿಷ್ಯವನ್ನು ರೂಪಿಸುವ ಮಕ್ಕಳಲ್ಲಿ ಮುಖ್ಯವಾಗಿ ಆರೋಗ್ಯ, ಯೋಗ, ಸಂಸ್ಕಂತಿ, ಹಾಗೂ ವೇಧ ಅವಶ್ಯವಾಗಿವೆ ಎಂದು ವಿಧಾನ ಪರಿಷತ್ ಶಾಸಕರಾದ ಪಿ.ಎಚ್.ಪೂಜಾರ ಹೇಳಿದರು. ನವನಗರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರಥಾ ಇಲಾಖೆ ಹಾಗೂ ಕೃಷಿ ತರಬೇತಿ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ ಅಭಿಯಾನದಡಿ ಶಾಲಾ ದೈಹಿಕ ಶಿಕ್ಷಕ, ಶಿಕ್ಷಕಿಯರಿಗೆ ಹಮ್ಮಿಕೊಂಡ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ಪೀಳಿಗೆ ಒಳ್ಳೇಯ ನಾಗರಿಕ ಆಗಬೇಕಾದರೆ ಒಳ್ಳೆಯ ಆರೋಗ್ಯ ಮುಖ್ಯವಾಗಿದೆ ಎಂದರು. ಭಾರತ ದೇಶ ಅನಾಧಿಕಾಲದಿಂದ ಅನೇಕ ವೈದ್ಯಪದ್ದತಿ ಅನುಸರಿಸುತ್ತಾ ಬಂದಿದ್ದು, ಪತಂಚಲಿ, ಚರಕ, ದನವಂತರಿ, ಋಷಿಗಳು ಅನೇಕ ಉಪಯುಕ್ತ ಗೀಡ ಮೂಲಿಕೆಗಳನ್ನು ಬಳಸಿಕೊಂಡು ಮರಣ ಶಯದಲ್ಲಿ ಇರುವಂತಹ ರೋಗಿಗಳನ್ನು ಗುಣಪಡಿಸಿದ್ದಾರೆ. ಈ ಪ್ರಸಂಗ ರಾಮಾಯಣದಲ್ಲಿ ನಡೆದಿದೆ. ಸಂಜೀವನಿ ತರಲು ಆಂಜನೇಯ ಸಂಜೀವಿನಿ ತಂದು ಲಕ್ಷ್ಮಣನನ್ನು ಬದುಕಿಸಿದ ಎಂಬ ಕಥೆ ಎಲ್ಲರಿಗೂ ತಿಳಿದ ವಿಷಯವಾಗಿದೆ. ಇಂದು…
ಬಾಗಲಕೋಟೆ: ರೂಪಾಂತರಿ ಕರೋನಾ ಕಾಣಿಸಿಕೊಂಡಿದ್ದರ ಹಿನ್ನಲೆಯಲ್ಲಿ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸನ್ನದ್ದವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲದೆಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ರೂಪಾಂತರಿ ಕರೋನಾ ನಿಯಂತ್ರಣ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯವರು ಆಶಾ ಕಾರ್ಯಕರ್ತೆಯರಿಂದ ವೈದ್ಯಾಧಿಕಾರಿಗಳ ವರೆಗೆ ಪ್ರತಿಯೊಬ್ಬರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿದಿನ ಕನಿಷ್ಟ 120 ತಪಾಸಣೆ ಮಾಡಬೇಕು. ಔಷಧಿ ಲಭ್ಯತೆ ಮತ್ತು ಯಂತ್ರೋಪಕರಣ ಸುಸ್ಥಿತಿ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ಬೇಜವಾಬ್ದಾರಿ ತೋರುವಂಗಿಲ್ಲ. ರೋಗಿಗಳು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಅವರ ಭಾವನೆಗಳಿಗೆ ದಕ್ಕೆಯಾಗದಂತೆ ಮನ ಪರಿವರ್ತಿಸುವ ಕಾರ್ಯವಾಗಬೇಕು ಎಂದರು. ಅಯ್ಯಪ್ಪ ಸ್ವಾಮಿ ಭಕ್ತರು ಕೇರಳಕ್ಕೆ ಹೋಗುವುದು ಬರುವುದು ಮಾಡುತ್ತಿರುವದರಿಂದ ಅವರ ಆಚರಣೆಗೆ ದಕ್ಕೆಯಾಗದಂತೆ ಅವರಲ್ಲಿ ಅಂತಹ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ವಾಸ ವ್ಯವಸ್ಥೆಯ ಜೊತೆಗೆ ಔಷದೋಪಚಾರ ಹಾಗೂ ಊಟೋಪಚಾರ ಮಾಡಬೇಕು. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಶಾಲಾ ಕಾಲೇಜು, ಬೇರೆ ರಾಜ್ಯದಿಂದ ಬರುವ…
ಕಮತಗಿ : ಬೈಕ್ ಹಾಗೂ ಕ್ರೋಸರ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಪಟ್ಟಣದ ಹೊರವಲಯದ ಬೆಳಗಾವಿ ರಾಯಚೂರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶಿರೂರ ಗ್ರಾಮದ ಸಿದ್ದಪ್ಪ ಶಿವಪ್ಪ ಜಂಗಣ್ಣವರ(55) ಗುರುತಿಸಲಾಗಿದೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.