Author: Sanje

ನವದೆಹಲಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು. ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ…

Read More

ಬಾಗಲಕೋಟೆ : ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಮಹಾದೇವಿ ಶೆಟ್ಟರ ತಯಾರಿಸಿದ ಸಿರಿಧಾನ್ಯದ ಮೈಸೂರ ಪಾಕ್ ಹಾಗೂ ಜಯಶ್ರೀ ತೆಗ್ಗಿ ತಯಾರಿಸಿದ ಮೋಮೋಸ್ ಖಾರದ ತಿನಿಸು ಪ್ರಥಮ ಬಹುಮಾನ ಪಡೆದುಕೊಂಡವು. 2023 ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಆಚರಿಸುತ್ತಿದೆ. ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯುವ ಮೇಳೆ-2024ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆ ಏರ್ಪಡಿಸಲಾಗಿದ್ದು, ಪಾಕ ಸ್ಪರ್ಧೆಯಲ್ಲಿ ತಯಾರಿಸಲಾದ ರುಚಿ ರುಚಿಯಾದ ವಿವಿಧ ಬಗೆಯ ಸಿರಿಧಾನ್ಯ ಪಾಕಗಳಲ್ಲಿ ಮೈಸೂರು ಪಾಕ್ ಮತ್ತು ಮೋಮೋಸ್ ಪ್ರಥಮ ಸ್ಥಾನ ಪಡೆದುಕೊಂಡಿವೆ. ಪಾಕ ಸ್ಪರ್ಧೆಯಲ್ಲಿ ಒಟ್ಟು 46 ಜನ ಪಾಕ ಪ್ರವೀಣೆಯರು ಭಾಗವಹಿಸಿ ಸಿರಿಧಾನ್ಯಗಳಲ್ಲಿ ಸಿಹಿ ಪದಾರ್ಥಗಳಾದ ಸಿರಿಧಾನ್ಯದ ಮೈಸೂರ ಪಾಕ್, ನವಣೆ ಪಾಯಸ, ರಾಗಿ ಉಂಡೆ, ನವಣಕ್ಕೆ ಉಂಡೆ, ರಾಗಿ ಹಲ್ವಾ, ಪಾಯಸ ಹಾಗೂ ಖಾರದ ತಿನಿಸುಗಳಾದ ಸಜ್ಜೆ ಬಿಸಿಬೆಳೆ ಬಾತ್, ಸಜ್ಜೆ ರೊಟ್ಟಿ, ಸಿರಿಧಾನ್ಯ ಮಸಾಲಾ ರೊಟ್ಟಿ,…

Read More

ಬಾಗಲಕೋಟೆ: ನಕಲು ರಹಿತವಾಗಿ ಪರೀಕ್ಷೆ ಬರೆಯಲು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ ತಿಳಿಸಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಹಾಗೂ ಶಾಲಾ ಉಸ್ತುವಾರಿ ಅಧಿಕಾರಿಗಳ ಜೊತೆಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ನೂರಕ್ಕೆ ನೂರರಷ್ಟು ಆಗಬೇಕು. ಪರೀಕ್ಷೆ ನಕಲು ಮುಕ್ತವಾಗಿ ನಡೆಸಬೇಕು. ಫಲಿತಾಂಶ ಹೆಚ್ಚಿಸಲು ವಾಮಮಾರ್ಗ ಕಂಡುಕೊಳ್ಳುವಂತಿಲ್ಲ. ಅಂತಹ ಪ್ರಕರಣ ಕಂಡುಬಂದಲ್ಲಿ ನಿರ್ದಾಕ್ಷಣ್ಯವಾಗಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಈ ವರ್ಷ ಗುಣಾತ್ಮಕ ಶಿಕ್ಷಣ ನೀಡಬೇಕು. ಶಿಕ್ಷಕರು ಪ್ರಮಾಣಿಕವಾಗಿ ತಮ್ಮ ವೃತ್ತಿಯನ್ನು ಮಾಡಬೇಕು. ಮುಖ್ಯೋಪಾದ್ಯಾಯರು ಅವರ ಕಾರ್ಯವನ್ನು ಗಮನಿಸುವದರ ಜೊತೆಗೆ ಮಕ್ಕಳ ಕಲಿಕೆ ಕುರಿತು ವಿಶ್ಲೇಷಣೆ ಮಾಡಲು ತಿಳಿಸಿದರು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದಾಗಿದ್ದು, ನಮ್ಮ ಚಿತ್ತ ಶತಕದತ್ತ ಎಂಬ ಧ್ಯೇಯ ವಾಕ್ಯವಾಗಿರಬೇಕು. ಕಾರಣವಿಲ್ಲದೇ ಶಿಕ್ಷಕರು ರಜೆ ಹಾಕುವುದು ಕಂಡುಬಂದಿದ್ದು,…

Read More

ನವದೆಹಲಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16…

Read More

ಬಾಗಲಕೋಟೆ-೧೬, ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನನಗೆ ಅವಕಾಶ ಸಿಕ್ಕರೆ ಖಂಡಿತ ಸ್ಪರ್ಧೆ ಮಾಡುವೆ. ಹಾಲಿ ಸಂ ಸದ ಪಿ.ಸಿ.ಗದ್ದಿಗೌಡರ ಸೇರಿ ದಂತೆ ಯಾರಿಗೆ ಟಿಕೆಟ್ ನೀಡಿ ದರು ಖಂಡಿತ ಬೆಂಬಲಿ ಸುತ್ತೇನೆ. ನಾನು ಯಾರ ವಿರೋಧಿ ಅಲ್ಲ ಎಂದು ಬಿಜೆಪಿ ಮುಖಂಡ ಡಾ.ಪ್ರಕಾಶ ಜಿ.ಪರಪ್ಪ ಹೇಳಿದರು. ನಗರದ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಬಾಗಲಕೊ ಟೆ ಮತಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ಅನೇಕ ಮಹತ್ವಾಂಕ್ಷಿ ಉದ್ದೇಶಗಳನ್ನು ಪೂರೈಸಲು ಇಲ್ಲಿ ಸ್ಪರ್ಧೆ ಬಯಸಿದ್ದೆನೆ. ಮೊದಲ ಹಂv ದಲ್ಲಿ ಜನರ ಸಮಸ್ಯೆ ಆಲಿಸಲು, ಚರ್ಚೆ ನಡೆಸಲು ಎಂಪಿ ಚಾಯ ಅಂತ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ನಮ್ಮ ತಂಡದ ಸದಸ್ಯರು ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಸಂಚರಿಸಿ ಅಲ್ಲಿಯ ಚಾಯ್ ಸಿದ್ದಪಡಿಸಿ ಜನರೊಂದಿಗೆ ಬೆರೆತು ಮಾತನಾಡಸಲಿದ್ದಾರೆ ಎಂದರು. ಎಂ ಅಂದರೇ ಮೋದಿ, ಪಿ ಅಂದರೇ ಪ್ರಕಾಶ ಎನ್ನುವ ಅರ್ಥ. ಬಾಗಲಕೋಟೆ ಮತಕ್ಷೆ ತ್ರದ ಅಭಿವೃದ್ಧಿ ನನ್ನ ಕನಸಾ ಗಿದೆ. ಪ್ರಧಾನ…

Read More

ಬಾಗಲಕೋಟೆ ; ರಾಜ್ಯ ಸರ್ಕಾರ ವಿರುದ್ದ ಭಾರತೀಯ ಜನತಾ ಪಾರ್ಟಿಯು ನಗರದ ಬಸವೇಶ್ವರ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ವಿವಸ್ತ್ರ ಘಟನೆ ಯನ್ನು ಖಂಡಿಸಿ ಬಿಜೆಪಿಯು ದೇಶಾದ್ಯಂತ ಪ್ರತಿಭಟನೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ಕಾಂ ಗ್ರೆಸ್ ಸರ್ಕಾರ ಬಂದ ಮೇಲೆ, ದಲಿತರ ಮೇಲೆ ಕೊಲೆಗಳು, ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದಂತಹ ಎರಡು ಘಟನೆಗಳು ಯಾರು ಮರೆಯಲು ಸಾಧ್ಯವಿಲ್ಲ. ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರು ವಂ ತಹದ್ದು ಈ ಸರ್ಕಾರಕ್ಕೆ ಕಪ್ಪು ಚುಕ್ಕೆ ಈ ಸರ್ಕಾರ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮುಂ ದುವರೆಯಬಾರದು. ಗೃಹ ಮಂತ್ರಿ ಪರಮೇಶ್ವರ್, ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡ ಬೇಕು ಎಂದು ಆಗ್ರಹಿಸಿದರು. ಅದರಲ್ಲಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಕೊಲೆ ಮಾಡುವುದಕ್ಕೆ…

Read More

ಬಾಗಲಕೋಟೆ: ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಮೇವು ಬೆಳೆಯಲು ಸೂಕ್ತವಿರುವ ಜಮೀನುಗಳನ್ನು ಗುರುತಿಸಿ ಕ್ರೀಯಾಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 34 ವಾರಗಳ ವರೆಗೆ ಆಗುವಷ್ಟು ಮೇವು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಮೇವು ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೇವು ಬೆಳೆಯಲು ಜಮೀನು ಗುರುತಿಸಿ ಕ್ರೀಯಾಯೋಜನೆ ರೂಪಿಸಲಾಗಿದೆ ಎಂದರು. ಸರಕಾರಿ ಕ್ಷೇತ್ರ ಹಾಗೂ ಮುಳುಗಡೆಯಾಗಿ ಭೂಸ್ವಾಧೀನಗೊಂಡ ಪ್ರದೇಶಗಳಲ್ಲಿ ರೈತರಿಗೆ ಮನವಲಿಸಿ ಮೇವು ಬೆಳೆಯಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ 6073 ಮೇವಿನ ಬೀಜಗಳ ಮಿನಿ ಕಿಟ್‍ಗಳನ್ನು ವಿತರಿಸಲಾಗಿದ್ದು, ಇನ್ನು 12 ಸಾವಿರ ಮಿನಿಕಿಟ್ ಬರಲಿವೆ. ಅಲ್ಲದೇ 45 ಸಾವಿರ ಮಿನಿಕಿಟ್‍ಗಳ ಬೇಡಿಕೆ ಇಡಲಾಗಿದೆ. ಬಾಗಲಕೋಟೆ ಉಪ ವಿಭಾಗದಲ್ಲಿ 1573 ಎಕರೆ ಹಾಗೂ ಜಮಖಂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 1116 ಎಕರೆ ಜಮೀನನ್ನು ಗುರುತಿಸಿ,…

Read More

ಬಾಗಲಕೋಟೆ: ಜಮಖಂಡಿ ನಗರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಟ ಮಳಿಗೆಗೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಬುಧವಾರ ಚಾಲನೆ ನೀಡಿದರು. ಕೃಷಿ ಉತ್ಪನ್ನಗಳ ಮಳಿಗೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಾರ್ವಜನಿಕರಿಗೆ ದಿನ ನಿತ್ಯ ಬಳಕೆಗೆ ಬೇಕಾಗುವ ವಸ್ತುಗಳು ಒಂದೇ ಕಡೆ ಸಿಗಲು ಮಾಡಿರುವಂತ ಸೂಪರ್ ಮಾರ್ಕೆಟ್ ತರಹ ಕೃಷಿ ಮಾಡುವಂತ ರೈತನಿಗೆ ಒಂದು ಕಡೆ ಹೋದರೆ ತಮಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿ ಸೇರಿದಂತೆ ಇತರೆ ವಸ್ತುಗಳು ಸಿಗುವ ಕಾರ್ಪೋರೇಟ ಕಂಪನಿಯವರು ಮಾಡಿದ್ದಾರೆ ಎಂದರು. ಈ ತರಹದ ಮಳಿಗೆಯನ್ನು ರಾಜ್ಯದಲ್ಲಿ 150ಕ್ಕೆಊ ಹೆಚ್ಚು ತೆರೆಯಲಿದ್ದಾರೆ. ಅವರ ಈ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಅಲ್ಲದೇ ರೈತರಿಗೆ ವಿಡಿಯೋ ಕಾನ್ಪರೇನ್ಸ್ ಮೂಲಕ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ. ಇದೊಂದು ಉತ್ತಮ ಕಾರ್ಯವಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮಿ ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ವಿಧಾನ ಪರಿಷತ್…

Read More

ಬಾಗಲಕೋಟೆ ; ರಾಜ್ಯ ಬಿಜೆಪಿಗರ ಪಾಲಿಗೆ ತೀವ್ರ ತಲೆನೋವಾಗಿರುವ ಹಿರಿಯ ಮುಖಂಡ ವಿ.ಸೋಮಣ್ಣ ಅವರ ನಡೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿರುವ ಬೆನ್ನಲ್ಲೆ ವಿ.ಸೋಮಣ್ಣ ಅವರು ಬಾಗ ಲಕೋಟೆ ಜಿಲ್ಲೆಯ ಸಿದ್ದನಕೊ ಳ್ಳಕ್ಕೆ ಭೇಟಿ ನೀಡಿ ಡಾ. ಶಿವ ಕುಮಾರ ಸ್ವಾಮೀಜಿ ಅವರ ಆರ್ಶೀವಾದ ಪಡೆದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತುಮಕೂರಿನ ಸಿದ್ದಗಂಗಾ ಮಠದ ಶಿಷ್ಯರಾಗಿರುವ ವಿ. ಸೋಮಣ್ಣ ಅವರು ಇತ್ತೀಚೆಗೆ ಸಿದ್ದಗಂಗಾ ಶ್ರೀಗಳ ಭೇಟಿ ಮಾ ಡಿದ ವೇಳೆ ಬಿಜೆಪಿಯ ವಿದ್ಯ ಮಾನ ಹಾಗೂ ತಮಗೆ ಆಗಿ ರುವ ಅನ್ಯಾಯ ಕುರಿತು ಚರ್ಚೆ ಆಗಿರುವುದು ಬಹಿರಂಗವಾಗಿ ರುವಾಗಲೇ ಅಮವಾಸ್ಯೆ ದಿನ ವಾದ ಮಂಗಳವಾರ ಸಿದ್ದನ ಕೊಳ್ಳಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಪಕ್ಷದ ಹೈಕಮಾಂಡ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜ್ ಕ್ಷೇತ್ರದ ಟಿಕೆಟ್ ತಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ವರುಣಾ ಮತ್ತು ಚಾಮರಾಜ ನಗರ…

Read More

ಬಾಗಲಕೋಟೆ-೧೩, ವಿವಾಹ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ ೯ ದಂಪತಿಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಂದಾಗುವ ಮೂಲಕ ಹೊಸ ಜೀವನಕ್ಕೆ ನಾಂದಿ ಹಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೇರಳೆ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕುಟುಂಬ ನ್ಯಾಯಾಲಯಗಳಲ್ಲಿ ವಿಚ್ಛೇದನ ಕೋರಿ ೯ ಜೋಡಿಗಳು ಅರ್ಜಿ ಸಲ್ಲಿಸಿದ್ದರು. ಸಂಧಾನದಲ್ಲಿ ತಮ್ಮ ತಪ್ಪನ್ನು ಅರಿತು ಒಟ್ಟಿಗೆ ಬಾಳುವ ಸಂಕಲ್ಪ ಮಾಡಿ, ಹೊಂದಾಣಿಕೆಯಿಂದ ಜೀವನ ನಡೆಸುವುದಾಗಿ ತಿಳಿಸಿದರು. ಬಾಗಲಕೋಟೆ ನ್ಯಾಯಾಲಯದಲ್ಲಿ ೧, ಜಮಖಂಡಿ ೧, ಬಾದಾಮಿ ೩, ಮುಧೋಳ ೨ ಹಾಗೂ ಬನಹಟ್ಟಿ ಕೋರ್ಟನಲ್ಲಿ ೨ ಸೇರಿ ಒಟ್ಟು ೯ ಜೋಡಿಗಳು ವಿಚ್ಚೇದನ ಹಿಂಪಡೆದು ಒಂದಾಗಿದ್ದಾರೆ. ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಬಾಕಿ ಇರುವ ೮೦೩೩ ಮತ್ತು ೧೧೫೩೪ ವಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೧೯೫೬೭ ಪ್ರಕರಣಗಳನ್ನು ವಿಚಾರಣೆಗಾಗಿ ತೆಗೆದುಕೊಳ್ಳಲಾಗಿತ್ತು. ಈ ಪೈಕಿ ೧೫೯೬೨ ಪ್ರಕರಣಗಳನ್ನು ಇತ್ಯರ್ಥ ಪಡಿಸಿ…

Read More