‘ಸಿಟಿ ಲೈಟ್ಸ್’ ಚಿತ್ರತಂಡ ನಟಿ ಮೋನಿಷಾ ವಿಜಯಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು, ಮೇ 10ರಂದು ಚಿತ್ರದ ಮತ್ತೊಂದು ಪ್ರೊಮೊವನ್ನು ಬಿಡುಗಡೆ ಮಾಡಿದೆ.
ಇದಕ್ಕೂ ಮುನ್ನ, ಮೇ 7ರಂದು ನಟ ವಿನಯ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಚಿತ್ರದ ಮೊದಲ ಪ್ರೋಮೊ ಬಿಡುಗಡೆಯಾಗಿತ್ತು. ಈ ಮೂಲಕ ಚಿತ್ರತಂಡ ಬಿಡುಗಡೆಗೂ ಮುನ್ನವೇ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸುತ್ತಿದೆ.
ದುನಿಯಾ ಟಾಕೀಸ್ ಮತ್ತು ಯಂತ್ರೋಧಾರಕ ಆಂಜನೇಯ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಸಿಟಿ ಲೈಟ್ಸ್’ ಚಿತ್ರವನ್ನು ವಿಜಯ್ ಕುಮಾರ್ ಅವರು ನಿರ್ದೇಶಿಸಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ನೀಡಿದ್ದಾರೆ.
ಮೋನಿಷಾ ವಿಜಯಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ಈ ಪ್ರೊಮೊದಲ್ಲಿ ಮೋನಿಷಾ ಅವರು ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿರುವ ದೃಶ್ಯವಿದೆ.