ಬಾಗಲಕೋಟೆ ; ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ನಡೆಯಲಿರುವ ಶರಣ ಮೇಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ದಿ.13 ರಂದು ಮಧ್ಯಾಹ್ನ 3.30 ಕ್ಕೆ ಕೂಡಲಸಂಗಮಕ್ಕೆ ಆಗಮಿಸುವ ಅವರು ಶರಣ ಮೇಳ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದ ನಂತರ ಹೆಲಿಪ್ಯಾಡ್ ಮೂಲಕ ಬಳ್ಳಾರಿ ಜಿಲ್ಲೆಯ ತೋರಣಗಲ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.