ಬಾಗಲಕೋಟೆ : ಚುನಾವಣೆಯ ಪ್ರತಿಯೊಂದು ಕಾರ್ಯದಲ್ಲಿ ಎಲ್ಲರೂ ಸಮನ್ವತೆಯಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಮತದಾನ ಪೂರ್ವ ಸಿದ್ದತೆ ಕುರಿತು ವಿಡಿಯೋ ಸಂವಾದ ಸಭೆಯ ಬಳಿಕ ಮಾತನಾಡಿದ ಅವರು ಆಯಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿಯನ್ನು ಮತ್ತೊಮ್ಮೆ ನೀಡಿ ಚುರುಕಾಗಿ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲು ತಿಳಿಸಿದರು.
ಚುನಾವಣಾ ಅಕ್ರಮಗಳ ಬಗ್ಗೆ ಕೇವಲ ಚೆಕ್‌ಪೋಸ್ಟಗಳಲ್ಲಿ ಮಾತ್ರ ನಿಗಾವಹಿಸದೇ ತಮ್ಮ ವ್ಯಾಪ್ತಿಯಲ್ಲಿ ನಡೆಯುವ ದೇವಸ್ಥಾನ, ಮಂಗಲ ಕಾರ್ಯಾಲಯ, ಜಾತ್ರೆ ಪಲ್ಲಕ್ಕಿ ಉತ್ಸವದಂತ ಕಾರ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಅಲ್ಲದೇ ಕೃಷಿ ಮಾರುಕಟ್ಟೆ, ಫುಡ್ ಕಾರ್ಪೋರೇಷನ್‌ಗೆ ಸಂಬಂಧಿಸಿದ ದಾಸ್ತಾನು ಸಂಗ್ರಹ ಸ್ಥಳಗಳಿಗೆ ಭೇಟಿ ನೀಡಿ ನೀತಿ ಸಂಹಿತೆಗೆ ಉಲ್ಲಂಘನೆಯಾಗದಂತೆ ಚಟುವಟಿಕೆಗಳ ನಡೆಯದಂತೆ ಎಚ್ಚರಿಕೆ ನೀಡಲು ತಿಳಿಸಿದರು. ಇನ್ನು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.
ಅಬಕಾರಿ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯವರು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣೆಗೆ ನಿಯೋಜಿತ ಸಂಬಂಧಿಸಿದ ಅಧಿಕಾರಿಗಳು ಇನ್ನು ಮುಂದೆ ಹೆಚ್ಚಿನ ಜವಾಬ್ದಾರಿಯಿಂದ ಕೆಲಸಗಳು ಆಗಬೇಕು. ಚೆಕ್‌ಪೋಸ್ಟಕ್ಕಿಂತ ಉಳಿದ ಕಡೆಗಳಲ್ಲಿ ಹೆಚ್ಚಿನ ನಿಗಾವಹಿಸಿ ವಹಿಸಬೇಕು. ಚುನಾವಣಾ ಅಕ್ರಮಗಳನ್ನು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ಪ್ರಥಮ ಹಂತದ ತರಬೇತಿ ಕಾರ್ಯ ಯಶಸ್ವಿಯಾಗಿ ನಡೆಸಿದಕ್ಕೆ ಜಿಲ್ಲಾಧಿಕಾರಿಗಳು ಸಂತೋಷ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂಸಿಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಆಯಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಕಾರ್ಯಗಳ ಜೊತೆಗೆ ಪ್ಲಾಯಿಂಗ್ ಸ್ಕಾ÷್ವಡ್, ಸ್ಟಾö್ಯಟಿಕ್ ಸರ್ವೆಲನ್ಸ್ ತಂಡಗಳ ಕಾರ್ಯಗಳ ಮೇಲೆ ಗಮನ ಹರಿಸುವ ಕಾರ್ಯವಾಗಬೇಕು. ಎಪ್ರೀಲ್ ೧೨ ರಿಂದ ನಾಮಪತ್ರ ಪಡೆಯುವ ಪ್ರಕ್ರಿಯೆ ಕಾರ್ಯ ಪ್ರಾರಂಭವಾಗುತ್ತಿದ್ದು, ರಾಜಕೀಯ ಪಕ್ಷಗಳ ರ‍್ಯಾಲಿ, ಮೆರವಣಿಗೆ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸೇರಿದಂತೆ ಆಯಾ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರು, ವಿವಿಧ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.