ಬಾಗಲಕೋಟೆ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 9 ರಂದು ಬೆಳಿಗ್ಗೆ 10:30 ರಿಂದ ಸಂಜೆ 4:30 ರ ತನಕ ನವನಗರದ ಜಿಲ್ಲಾಡಳಿತ ಭವನದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಮುಧೋಳದ ಕುಮಾರ ಇಂಜಿನಿಯರಿಂಗ್ ಕಂಪನಿಯ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 19 ರಿಂದ 30 ವರ್ಷದ ವಯೋಮಿತಿಯ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಹಾಗೂ ಪದವೀಧರರು ಹಾಜರಾಗಬಹುದು. ಆಸಕ್ತರು ಬಯೋಡೇಟಾ ಹಾಗೂ ಮೂಲ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08354-235337, 7676692029 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.