ಬಾಗಲಕೋಟೆ : ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಆರೈಕೆಯ ಅಂತರವನ್ನು ಕಡಿತಗೊಳಿಸಿ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡ ಕ್ಯಾನ್ಸರ್ ಕುರಿತ ಅರಿವು ಮತ್ತು ಜಾಗೃತಿ ಜಾಥಾಕ್ಕೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಸೋಮವಾರ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ ಕೋಶ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕ್ಯಾನ್ಸರ ಬಗ್ಗೆ ಜನರಲ್ಲಿ ಇರುವ ತಪ್ಪು ಮಾಹಿತಿ ಮತ್ತು ತಪ್ಪು ಗ್ರಹಿಕೆಯಿಂದ ದೂರ ಮಾಡಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಾಗೃತಿ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ನಾನಾ ಕಡೆ ಸಂಚರಿಸಿ ಜಿಲ್ಲಾ ಆಸ್ಪತ್ರೆಗೆ ಮುಕ್ತಾಯಗೊಂಡಿತು. ಜಾಥಾದಲ್ಲಿ ಸರಕಾರಿ ಅರೇ ವೈದ್ಯಕೀಯ ಕಾಲೇಜ, ಜಿಲ್ಲಾ ಆಸ್ಪತ್ರೆ, ನಂದಿ ಇನ್‌ಸ್ಟಿಟ್ಯೂಟ್ ಆಪ್ ನರ್ಸಿಂಗ್ ಸೈನ್ಸ, ಡಾ.ಸುಭಾಷ ಪಾಟೀಲ ಇನ್‌ಸ್ಟಿಟ್ಯೂಟ್ ಆಪ್ ಪ್ಯಾರಾ ಮೇಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾದೂದ್ದಕ್ಕೂ ವಿದ್ಯಾರ್ಥಿಗಳು ಕ್ಯಾನ್ಸ್ರ ಕುರಿತ ಜಾಗೃತಿ ಘೋಷಣೆಗಳನ್ನು ಕೂಗಿದರು.
ಜಾಥಾದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೇಟ್ಟಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೇಣ್ಣವರ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ.ಅಂದಾನಗೌಡ ಪಾಟೀಲ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಶಿವನಗೌಡ ಪಾಟೀಲ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಗ್ಯಾನಪ್ಪ ದಾಸರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಸಿನ್ನೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.