ಬಾಗಲಕೋಟೆ: ನವನಗರದ ಸೆಕ್ಟರ ನಂ.7ರಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಮೆಟ್ರಿಕ್ ನಂತರದ ಇಂಜಿನೀಯರಿಂಗ್ ಮತ್ತು ಮೆಡಿಕಲ್ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಸೋಮವಾರ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ವಸತಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಆರ್.ಐ.ಡಿ.ಎಫ್ ಟ್ರಾಂಜ್-30 ಕಾರ್ಯಕ್ರಮದಡಿ ಯೋಜನಾ ವೆಚ್ಚ 500 ಲಕ್ಷಗಳು ಇದ್ದು, ಅಂದಾಜು ಮೊತ್ತ 378.70 ಲಕ್ಷ ರೂ.ಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ಕಾಮಗಾರಿ 11 ತಿಂಗಳ ಅವಧಿ ಇದ್ದು, ಇದಕ್ಕೂ ಪೂರ್ವದಲ್ಲಿ ಪೂರ್ಣಗೊಳಿಸುವಂತೆ ನಿರ್ಮಾಣ ಸಂಸ್ಥೆಗೆ ಸೂಚನೆ ನೀಡಿದರು.
ಒಟ್ಟು 13551 ಚದುರ ಅಡಿಗಳಷ್ಟು ವಿಸ್ತೀರ್ಣ ಹೊಂದಿದ್ದು, ಅದರಲ್ಲಿ ನೆಲಮಹಡಿ 463.41 ಚ.ಮೀ ವಿಸ್ತೀರ್ಣ ಹೊಂದಿದ್ದು, ಮೊದಲನೇ ಮತ್ತು ಎರಡನೇ ಮಹಡಿ 397 ಚ.ಮೀ ವಿಸ್ತರರ್ಣ ಹೊಂದಿದೆ ನೆಲ ಮಹಡಿಯಲ್ಲಿ ವಿಶ್ರಾಂತಿ ಕೊಠಡಿ, ಊಟದ ಕೋಣೆ, ಅಡುಗೆ ಕೋಣೆ, ಮೇಲ್ವಿಚಾರಕರ, ಕಚೇರಿ, ಸ್ನಾನದ ಕೋಣೆಗಳು, ಶೌಚಾಲಯ, ಉಗ್ರಾಣ ಕೊಠಡಿ, ವಿದ್ಯಾರ್ಥಿಗಳ ಕೊಠಡಿಗಳು ಇರುವುದಾಗಿ ಹೇಳಿದರು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮಲ್ಲಿ ಜಿ.ಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕಾ ಅಧ್ಯಕ್ಷ ಎಸ್.ಎನ್.ರಾಂಪೂರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆಶಾಪೂರ, ಕರ್ನಾಟಕ ಗೃಹ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ವಿಜಯ ಸೇರಿದಂತೆ ದ್ಯಾಮಣ್ಣ ಗಾಳಿ, ನಾಗರಾಜ ಹದ್ಲಿ ಹಾಗೂ ಇತರರು ಉಪಸ್ಥಿತರಿದ್ದರು.