ಬಾಗಲಕೋಟೆ: ನಿರಾಮಯ ಆಯುರ್ವೇದ ಆಸ್ಪತ್ರೆ ಉದ್ಘಾಟನಾ ಸಮಾರಂಭವು ಜೂನ್ 29 ರಂದು ಬೆಳಗ್ಗೆ 10 ಗಂಟೆಗೆ ನವನಗರದ ಸೆ.ನಂ. 35, ಪೊಲೀಸ್ ಪ್ಯಾಲೇಸ್ ಹತ್ತಿರ ನಡೆಯಲಿದೆ ಎಂದು ಡಾ. ವೆಂಕಟೇಶ್ ಗೌಡರ ಹಾಗೂ ಸುಪ್ರಿಯಾ ಗೌಡರ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಉದ್ಘಾಟನೆಯನ್ನು ಮಾಜಿ ಸಚಿವರಾದ ಬಿ. ರಾಮುಲು ಮಾಡಲಿದ್ದಾರೆ. ಅಧ್ಯ ಕ್ಷತೆ ಶಾಸಕ ಎಚ್.ವಾಯ್ ಮೇಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷರಾದ ಸವಿತಾ ಲೆಂಕೆಣ್ಣವರ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮಾಜಿ ಶಾಸಕ ರಾಜಶೇಖರ್ ಶೀಲವಂತ, ಹೊಳೆಬಸು ಶೆಟ್ಟರ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರ, ಡಾ. ವಿಶ್ವನಾಥ ವಾಸೇದಾರ, ಡಾ. ಶಿವಕುಮಾರ ಗಂಗಲ್ ಆಗಮಿಸಲಿದ್ದಾರೆ ಎಂದು ಹೇಳಿದರು.
ಕಳೆದ 8 ವರ್ಷಗಳಿಂದ ಗುಳೇದಗುಡ್ಡ ಪಟ್ಟಣದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಈಗ ಬಾಗಲಕೋಟೆಯಲ್ಲಿ ಆಸ್ಪತ್ರೆಯನ್ನು ಆರಂಭಿಸಲಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ವಿನೋದ ಗೌಡರ ಇದ್ದರು.