ಬಾಗಲಕೋಟೆ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಹೆಚ್ಚು ಜನಸಂದಣಿ, ಮಾರುಕಟ್ಟೆ ಪ್ರದೇಶ, ಕಟ್ಟಡ ನಿರ್ಮಾಣ, ನರೇಗಾ ಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ಮುನ್ನಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅತೀಯಾದ ಉಷ್ಣಾಂಶದಿAದಾಗಿ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿದ್ದು, ಆರೋಗ್ಯ ಇಲಾಖೆಯ ಸೂಕ್ತ ಸಲಹೆಗಳನ್ನು ವ್ಯಾಪಕವಾಗಿ ಜಾಗೃತಿ ಮೂಡಿಸಲು ಮುಂದಾಗಬೇಕು. ಈ ಬಗ್ಗೆ ಆಯಾ ತಾಲೂಕಾ ಹಂತದಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಹೀಟ್ ಸ್ಟೊçÃಕ್ ಆಗುವದನ್ನು ತಡೆಗಟ್ಟಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತಗಟ್ಟೆಗಳಿಗೆ ಹೆಚ್ಚಿನ ಜನರು ಬರುತ್ತಿರುತ್ತಾರೆ. ಅಲ್ಲದೇ ನರೇಗಾದಡಿ ಸದ್ಯ ೧೫ ಸಾವಿರಕ್ಕೂ ಹೆಚ್ಚಿನ ಕೂಲಿ ಕಾರ್ಮಿಕರು ಬಿಸಿಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಟ್ ಸ್ಟೊçÃಕ್ ಬರದಂತೆ ಮುಂಜಾಗ್ರತಾ ಕ್ರಮಗಳ ಪಾಲಿಸುವ ಕುರಿತು ಅರಿವು ಮೂಡಿಸಬೇಕು. ಈ ಬಗ್ಗೆ ಐಇಸಿ ಚಟುವಟಿಕೆಗಳನ್ನು ಹೆಚ್ಚಿಗೆ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಅತೀಯಾದ ಉಷ್ಣಾಂಶದಿAದ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಕ್ಕಾಗಿ ಕ್ರೀಯಾ ಯೋಜನೆ ರೂಪಿಸಲು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಬಿಸಿ ಗಾಳಿಯಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುವ ಸಮಸ್ಯೆಗಳ ಬಗ್ಗೆ ಜಿಲ್ಲೆಯಲ್ಲಿ ನಡೆಯುವ ಜಾತ್ರೆ, ಸಂತೆಗಳಲ್ಲಿ ಕರಪತ್ರ, ಪೋಸ್ಟರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಬೇಕು. ಚೆಕ್‌ಪೋಸ್ಟಗಳಲ್ಲಿ ದಿನದ ೨೪ ಗಂಟೆಗಳ ಕಾಲ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದು, ಅವರಿಗೂ ಸಹ ಓಆರ್‌ಎಸ್ ಪಾಕೀಟಗಳನ್ನು ನೀಡಲು ತಿಳಿಸಿದರು. ನರೇಗಾದಡಿ ಎಪ್ರೀಲ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯ ಬೇಡಿಕೆ ಇದ್ದು, ಅಂದಾಜು ೩೦ ಸಾವಿರಕ್ಕಿಂತ ಹೆಚ್ಚಿನ ಕೂಲಿಕಾರ್ಮಿಕರು ಕೆಲಸ ಮಾಡಲು ಬರುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ತಪಾಸಣೆಗೆ ಕ್ಯಾಂಪ್ ಹಮ್ಮಿಕೊಳ್ಳಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಸುವರ್ಣ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿರಿದ್ದರು.