ಬಾಗಲಕೋಟೆ: ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ ವತಿಯಿಂದ ಚಿತ್ರದುರ್ಗದ ಪ್ರೊ. ಎಚ್. ಲಿಂಗಪ್ಪ ರಚಿಸಿರುವ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜು.೨ ಬಿವಿವಿ ಸಂಘಧ ಮಿನಿ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ರಂದು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಶಿವಾನಂದ ಟವಳಿ ಹೇಳಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರ ದುರ್ಗದ ಪ್ರೊ.ಎಚ್.ಲಿಂಗಪ್ಪ ಅವರು ರಚಿಸಿರುವ ಆದಿಮರ ಚರಿತ್ರೆ ಮತ್ತು ಎಂಟು ದಲಿತ ಶರಣರ ಶರಣೆ ವಚನಕಾರರ ಕೃತಿ ಲೋಕಾರ್ಪಣೆ ಕಾಯ ಕ್ರಮವನ್ನು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಚಿತ್ರದುರ್ಗದ ಶಿವಶರಣ ಮಾದರ ಚೆನ್ನಯ್ಯ ಗುರುಪೀಠದ ಡಾ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಶಾಸಕವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪಿ.ಸಿಗದ್ದಿಗೌಡರ, ಮಾಜಿ ಸಚಿವ ಎಸ್.ಆರ್. ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಸಭಾಪತಿ ಜಿ.ಎನ್.ಪಾಟೀಲ, ಬೆಂಗಳೂರಿನ ಸಿವಿಜಿ ಪಬ್ಲಿಕೇಷನ್ ನ ಪ್ರಕಾಶಕರಾದ ಡಾ.ಚನ್ನವೀರಗೌಡ, ನಗರಸಭೆ ಸಭಾಪತಿ ಯಲ್ಲಪ್ಪ ನಾರಾಯಣಿ, ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ ಗೌರವಾಧ್ಯಕ್ಷ ಯಲ್ಲಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದರು. ಮುಖಂಡರಾದ ಮುತ್ತಣ್ಣ ಬೆಣ್ಣೂರ, ಹಣಮಂತ ಚಿಮ್ಮಲಗಿ, ಶಿವಾನಂದ ಬಿಸನಾಳ, ಸಿದ್ದು ದೊಡ್ಡಮನಿ ಇತರರಿದ್ದರು