ಪ್ರಭಾಸ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹು ನಿರೀಕ್ಷಿತ ‘ದಿ ರಾಜಾ ಸಾಬ್’ ಚಿತ್ರದ ಟೀಸರ್ ಇಂದು (ಜೂನ್ 16) ಬಿಡುಗಡೆಯಾಗಿದೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ಹಾರರ್ ಕಾಮಿಡಿ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ಮಾರುತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
‘ಬಾಹುಬಲಿ’ ಖ್ಯಾತಿಯ ಪ್ರಭಾಸ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಸಂಜಯ್ ದತ್, ಮಾಳವಿಕಾ ಮೋಹನನ್, ಬೋಮನ್ ಇರಾನಿ, ಸಮುದ್ರಕನಿ, ಬ್ರಹ್ಮಾನಂದಂ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ನಟಿ ನಯನತಾರಾ ಒಂದು ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ‘ದಿ ರಾಜಾ ಸಾಬ್’ ಚಿತ್ರವನ್ನು ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಡಿಸೆಂಬರ್ 5 ರಂದು ವಿಶ್ವಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.
