ಬಾದಾಮಿ : ಕನ್ನಡಿಗರು ಸ್ವಾಭಿಮಾನಿಗಳು ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆ ಅಪಾರ ಎಂದು ಕೈ ಅಭ್ಯರ್ಥಿ ಸಂಯುಕ್ತ ಪಾಟೀಲ್ ಹೇಳಿದರು.
ಬಾದಾಮಿ ವಿಧಾನಸಭಾ ಕ್ಷೇತ್ರದ ಕರಡಿಗುಡ್ಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೈ ಅಭ್ಯರ್ಥಿ ಸಂಯುಕ್ತಾ ಪಾಟೀಲ್, ನಮ್ಮ ರಾಜ್ಯದ ಪಾಲಿನ ತೆರಿಗೆ ಹಣವನ್ನು ನಮ್ಮ ಸರ್ಕಾರ ಕೇಳಿದಾಗ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ಹಣವನ್ನು ನೀಡಲಿಲ್ಲ. ಕರ್ನಾಟಕ ರಾಜ್ಯಕ್ಕೆ ತೆರಿಗೆ ಮೋಸವನ್ನ ಕೇಂದ್ರ ಸರ್ಕಾರ ಮಾಡಿದೆ ಎಂದು ಹೇಳಿದರು.
ಈ ಬಾರಿ ಬಾಗಲಕೋಟೆ ಅಭಿವೃದ್ಧಿಗೆ ಕ್ರಮ ಸಂಖ್ಯೆ 03, ಹಸ್ತದ ಗುರುತಿಗೆ ನಿಮ್ಮ ಮತ ನೀಡಿ ಎಂದು ಮತಯಾಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಿ ಬಿ ಚಿಮ್ಮನಕಟ್ಟಿ, ಹಿರಿಯರಾದ ಶರಣಪ್ಪ ಕಲಬಾಳ ಶೆಟ್ಟರ, ಬ್ಲಾಕ ಅಧ್ಯಕ್ಷರಾದ ಸಂಜು ಬರಗುಂಡಿ ಹಾಗೂ ಇತರೆ ನಾಯಕರು ಉಪಸ್ಥಿತರಿದ್ದರು.