ಯಶ್ ರಾಜ್ ಫಿಲ್ಮ್ಸ್‌ನ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ‘ವಾರ್ 2’ ಚಿತ್ರದ ಟೀಸರ್ ಇಂದು(ಮೇ 20) ಬೆಳಿಗ್ಗೆ ಬಿಡುಗಡೆಯಾಗಿದೆ. ನಟ ಜೂನಿಯರ್ ಎನ್‌ಟಿಆರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಟೀಸರ್ ಅನ್ನು ಚಿತ್ರತಂಡ ಅನಾವರಣಗೊಳಿಸಿದೆ. ಈ ಚಿತ್ರವು 2019ರಲ್ಲಿ ಬಿಡುಗಡೆಯಾಗಿದ್ದ ‘ವಾರ್’ ಚಿತ್ರದ ಮುಂದುವರಿದ ಭಾಗವಾಗಿದೆ.
‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್, ಹೃತಿಕ್ ರೋಷನ್ ಹಾಗೂ ಕಿಯಾರಾ ಅಡ್ವಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಅಯಾನ್ ಮುಖರ್ಜಿ ನಿರ್ದೇಶಿಸಿದ್ದು, ಕಥೆ ಬರೆದಿರುವ ಆದಿತ್ಯ ಚೋಪ್ರಾ ಅವರೇ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ.
‘ವಾರ್ 2’ ಚಿತ್ರ ಇದೇ ಆಗಸ್ಟ್ 14ರಂದು ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.